ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ನಗರ ಪೊಲೀಸ್ ಆಯುಕ್ತರಾಗಿದ್ದ ಶಶಿಕುಮಾರ್ ಅವರು ರೈಲ್ವೆ ಡಿಐಜಿಯಾಗಿ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಕುಲದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಶಿಕುಮಾರ್ ಅವರು ನೂತನ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.