ಕುಮಾರ ಸ್ವಾಮಿ, ವಿ. ಸೋಮಣ್ಣ ಸೇರಿದಂತೆ ಮೋದಿ ಸಂಪುಟದ ಹೊಸ ಮುಖಗಳು

Prasthutha|

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಹಿರಿಯ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಕೂಡ ಎನ್‌ಡಿಎ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿರಿಯಯರ ಹಲವಾರು ಹೊಸ ಮುಖಗಳನ್ನು ಮೋದಿ ಕ್ಯಾಬಿನೆಟ್ ಸೇರಿಸಿಕೊಳ್ಳಲಾಗಿದೆ.

- Advertisement -
  1. ಹೆಚ್.ಡಿ. ಕುಮಾರಸ್ವಾಮಿ (ಜೆಡಿಎಸ್)

ಬಿಜೆಪಿಯೊಂದಿಗಿನ ಜೆಡಿಎಸ್ ಮೈತ್ರಿಯಿಂದಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮೋದಿ ಕ್ಯಾಬಿನೆಟ್ 3.0 ರಲ್ಲಿ ಸೇರ್ಪಡೆಗೊಂಡಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸೇರಿ ರಾಜ್ಯದಲ್ಲಿ 19 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಬಿಜೆಪಿ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

  1. ವಿ ಸೋಮಣ್ಣ (ಬಿಜೆಪಿ)

ಬಿಜೆಪಿ ನಾಯಕ ವಿ ಸೋಮಣ್ಣ ಅವರು ಮೋದಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ತುಮಕೂರಿನ ಲೋಕಸಭಾ ಸದಸ್ಯರಾಗಿರುವ ಸೋಮಣ್ಣ ಅವರು ಈ ಹಿಂದೆ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ

- Advertisement -
  1. ಎಂಎಲ್ ಖಟ್ಟರ್ (ಬಿಜೆಪಿ)

ಹರಿಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವರ್ಷದ ಮಾರ್ಚ್‌ನಲ್ಲಿ, ವಿಧಾನಸಭೆ ಹೊಸ್ತಿಲಲ್ಲಿ ಖಟ್ಟರ್ ಅವರ ಸಿಎಂ ಸ್ಥಾನಕ್ಕೆ ನಯಾಬ್ ಸಿಂಗ್ ಸೈನಿ ಅವರನ್ನು ಪಕ್ಷ ನೇಮಿಸಿತು. ನಂತರ ಲೋಕಸಭೆ ಚುನಾವಣೆಯಲ್ಲಿ ಕರ್ನಾಲ್ ಕ್ಷೇತ್ರದಿಂದ ಕಣಕ್ಕಿಳಿದ ಖಟ್ಟರ್ ಅವರು 2,32,577 ಮತಗಳೊಂದಿಎ ಭಾರೀ ಅಂತರದ ಗೆಲುವು ಸಾಧಿಸಿದರು.

  1. ಜಯಂತ್ ಚೌಧರಿ (RLD)

ಚುನಾವಣೆಯಲ್ಲಿ ಜಯಂತ್ ಚೌಧರಿ ನೇತೃತ್ವದ ಆರ್‌ಎಲ್‌ಡಿ ಉತ್ತರ ಪ್ರದೇಶದಲ್ಲಿ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಈ ಬಾರಿ ಬಿಜೆಪಿಗೆ ಯುಪಿಯಲ್ಲಿ ತೀವ್ರ ಹಿನ್ನಡೆಯಾಗಿದೆ.

  1. ಲಾಲನ್ ಸಿಂಗ್ (ಜೆಡಿಯು)

69 ವರ್ಷದ ಲಾಲನ್ ಸಿಂಗ್ ಹೊಸ ಸರ್ಕಾರದಲ್ಲಿ ಕೇಂದ್ರ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 4 ಅವಧಿಯ ಸಂಸದರು ಜೆಡಿಯುನ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರಾಗಿದ್ದಾರೆ.

  1. ಜಿತನ್ ರಾಮ್ ಮಂಜಿ (HAM)

ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

  1. ರಾಮ್ ಮೋಹನ್ ನಾಯ್ಡು ಕಿಂಜಾರಪು (ಟಿಡಿಪಿ)

36 ವರ್ಷದ ಟಿಡಿಪಿ ನಾಯಕ ಸಚಿವ ರಾಮ್ ಮೋಹನ್ ನಾಯ್ಡು ಕಿಂಜಾರಪು ಸಂಪುಟದಲ್ಲಿನ ಅತ್ಯಂತ ಕಿರಿಯ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಶ್ರೀಕಾಕುಳಂ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದಾರೆ, ಜೊತೆಗೆ ಟಿಡಿಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ.

  1. ಚಿರಾಗ್ ಪಾಸ್ವಾನ್ (LJP)

ಲೋಕಜನ ಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಎನ್‌ಡಿಎ ಸರ್ಕಾರದ ಮೂರನೇ ಅವಧಿಯಲ್ಲಿ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಬಿಹಾರದ ಹಾಜಿಪುರದಿಂದ ಗೆದ್ದಿದ್ದಾರೆ. ಚಿರಾಗ್ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ.

  1. ಬಂಡಿ ಸಂಜಯ್ ಕುಮಾರ್ (ಬಿಜೆಪಿ)

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಡಿ ಸಂಜಯ್ ಕುಮಾರ್ ಮೋದಿ ಸಂಪುಟ ಸೇರಿದ್ದಾರೆ. ಸಚಿವರಾದ ಬಳಿಕ ಕರೀಂನಗರ ಸಂಸದೀಯ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

  1. ಹರ್ಷ್ ಮಲ್ಹೋತ್ರಾ (ಬಿಜೆಪಿ)

ಮೊದಲ ಬಾರಿಗೆ ಸಂಸದರಾಗಿರುವ ಮಲ್ಹೋತ್ರಾ ಅವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಜಮ್ನಾಪಾರ್ ಪೂರ್ವ ದೆಹಲಿ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕುಲದೀಪ್ ಕುಮಾರ್ ವಿರುದ್ಧ ಗೆದ್ದಿದ್ದಾರೆ.

Join Whatsapp
Exit mobile version