ಕುಮಾರಸ್ವಾಮಿ ಜೋಕರ್ ಇದ್ದಂತೆ: ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯ

Prasthutha|

ಮಂಗಳೂರ :  ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿಯಾಗಿದ್ದು, ಅವರು ಒಂದು ತರಹ ಜೋಕರ್ ಇದ್ದಂತೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

- Advertisement -

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಯಾವ ಪಕ್ಷದೊಂದಿಗೆ ಬೇಕಾದರೂ ಹೊಂದಾಣಿಗೆಯಾಗುತ್ತಾರೆ. ಕುಮಾರಸ್ವಾಮಿಗೆ ನೈತಿಕತೆ, ಸಿದ್ಧಾಂತ ಯಾವುದೂ ಇಲ್ಲ, ಅವರು ಮುಖ್ಯಮಂತ್ರಿಯಾಗಿದ್ದಾಗ ಉಡಾಫೆಯಾಗಿ ವರ್ತಿಸಿದ್ದರು ಎಂದು ಕುಟುಕಿದರು.

ಕುಮಾರಸ್ವಾಮಿಯವರಿಗೆ ಇದೀಗ ಆತಂಕ ಕಾಡುತ್ತಿದೆ. ದಿನಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ, ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ, ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ವ್ಯಂಗ್ಯವಾಡಿದರು.

2023ರ ಚುನಾವಣೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ. ಹೀಗಾಗಿ ಕುಮಾರಸ್ವಾಮಿ ಆತಂಕದಲ್ಲಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.

- Advertisement -