Home ಟಾಪ್ ಸುದ್ದಿಗಳು ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್: ಕುಮಾರಸ್ವಾಮಿ ಆರೋಪ

ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್: ಕುಮಾರಸ್ವಾಮಿ ಆರೋಪ

►ಚನ್ನಪಟ್ಟಣ ಉಪ ಚುನಾವಣೆಗೆ ಓಲೈಕೆ ರಾಜಕೀಯ


ಮಂಡ್ಯ: ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.


ನಾಗಮಂಗಲದ ಗಲಭೆ ಪೀಡಿತ ಸ್ಥಳಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ಇಳಿಸಲು ರಾಮನಗರ, ಚನ್ನಪಟ್ಟಣದಲ್ಲಿ ಗಲಾಟೆ ನಡೆದಿತ್ತು. ಆಗ ಕಾಂಗ್ರೆಸ್ ನವರೇ ಬೆಂಕಿ ಹಚ್ಚಿ ಗಲಾಟೆ ಮಾಡಿಸಿದ್ದರು. ಅದು ಕೋಮು ಗಲಭೆ ಆಗಿರಲಿಲ್ಲ. ಮುಂದೆ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ. ಅದಕ್ಕಾಗಿ ಹೀಗೆ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.


ಗಣೇಶ ಕೂರಿಸಿದವರನ್ನೇ ಎಫ್ ಐಆರ್ ನಲ್ಲಿ ಎ1 ಆರೋಪಿಯನ್ನಾಗಿ ಮಾಡಿದ್ದೀರಾ. ಇದು ನಿಮ್ಮ ನಡವಳಿಯನ್ನು ತೋರಿಸುತ್ತೆ. ಪೊಲೀಸರ ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ಹಾಳು ಮಾಡಿಕೊಳ್ಳುವುದು ಬೇಡ. ಅಮಾಯಕರನ್ನು ಬಂಧಿಸಿರೋದು ತಪ್ಪು. ಆ ಅಮಾಯಕರು ಜೈಲಿನಿಂದ ಬರೋದು ಯಾವಾಗ? ಹಿಂದೆ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಗಲಭೆಯ ಸ್ಪಾನ್ಸರ್ ಕಾಂಗ್ರೆಸ್ ನಾಯಕರು. ಅಲ್ಲಿ ಜೈಲಿಗೆ ಹೋದವರು ಈಗ ಏನು ಮಾಡುತ್ತಾ ಇದ್ದಾರೆ. ಈ ರೀತಿ ನಾಗಮಂಗಲದಲ್ಲೂ ಆಗಬೇಕಾ ಎಂದು ಪ್ರಶ್ನಿನಿಸಿದರು.

Join Whatsapp
Exit mobile version