ಬೆಂಗಳೂರು: ಕೇಂದ್ರ ಸರ್ಕಾರದ ವತಿಯಿಂದ ರೈತರಿಗೆ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಗಳು ಸಾಲದ ಖಾತೆಗೆ ಜಮೆ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬ್ಯಾಂಕ್ಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ ಎಂದಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ. ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ಉಲ್ಲೇಖಿಸಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ @INCKarnataka ಸರಕಾರ ಕೈಕಟ್ಟಿ ಕೂತಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2024
•ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ…