ಕಾಂಗ್ರೆಸ್ –ಬಿಜೆಪಿ ವಿರುದ್ಧ ಹೋರಾಟಕ್ಕೆ ಕಾರ್ಯಕರ್ತರಿಗೆ ಕರೆ ಕೊಟ್ಟ ಕುಮಾರಸ್ವಾಮಿ

Prasthutha|

ಬೆಂಗಳೂರು: ದೇಶದ ಆರ್ಥಿಕತೆ ಮೂರನೇ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಪ್ರಜೆಗಳು ಕಾರಣವೇ ಹೊರತು ಸರ್ಕಾರವಲ್ಲ. ಈಗ ಈಸ್ಟ್ ಇಂಡಿಯಾ ಕಂಪನಿಗಳು ಈಗ ಭಾರತದಲ್ಲೇ ಹುಟ್ಟಿಕೊಂಡಿವೆ. ಎರಡು ರಾಷ್ಟ್ರೀಯ ಪಕ್ಷಗಳು ಅದರ ಸ್ಥಾನ ತುಂಬುತ್ತಿವೆ. ದೇಶದ ಸಂಪತ್ತನ್ನು ಲೂಟಿ ಮಾಡುತ್ತಿದ್ದರೂ ಮೌನವಾಗಿ ನೋಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಾರ್ಯಕರ್ತರು ಹೋರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕರೆ ನೀಡಿದರು.

- Advertisement -

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ ಜೆ.ಪಿ ಭವನದಲ್ಲಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಭಾಗವಹಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, 77ನೇ ಸ್ವಾತಂತ್ರತ್ಯೋತ್ಸವದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ರು, ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಬ್ರಿಟಿಷರು, ದೇಶವನ್ನು ತಮ್ಮ ಆಳ್ವಿಕೆಯಲ್ಲಿ ಇಟ್ಟುಕೊಂಡಿದ್ದರು, ಅನೇಕರ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದರೂ, ಬ್ರಿಟಿಷರು ಭಾರತವನ್ನು ಮುಕ್ತಗೊಳಿಸುವುದಕ್ಕೆ ಒಪ್ಪಿರಲಿಲ್ಲ. ಇಂತಹ ಅನಿವಾರ್ಯ ಸಂದರ್ಭದಲ್ಲಿ ದೇಶ ವಿಭಜನೆಯ ಸಮಸ್ಯೆಯನ್ನೂ ಅನುಭವಿಸಿತು ಎಂದರು.



Join Whatsapp
Exit mobile version