Home ರಾಜ್ಯ ಕುಮಾರಸ್ವಾಮಿ ಮಾಡುತ್ತಿರುವುದು ನೀಚ ರಾಜಕಾರಣ: ಯತೀಂದ್ರ ಸಿದ್ದರಾಮಯ್ಯ

ಕುಮಾರಸ್ವಾಮಿ ಮಾಡುತ್ತಿರುವುದು ನೀಚ ರಾಜಕಾರಣ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಅವರು ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ ಎಂದು ಮಾಜಿ ಶಾಸಕ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.


ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊವನ್ನಿಟ್ಟುಕೊಂಡು ಸರ್ಕಾರವನ್ನು, ಸಿಎಂ ಸಿದ್ದರಾಮಯ್ಯನವರನ್ನು ಕಟುವಾಗಿ ಟೀಕಿಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Join Whatsapp
Exit mobile version