ಕುಮಾರಸ್ವಾಮಿ ಸತ್ಯಕ್ಕೆ ಅಪಚಾರವಾಗುವಂತಹ ಆಪಾದನೆ ಮಾಡಿದ್ದಾರೆ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿಯವರು ಅತ್ಯಂತ ಬೇಜವಾಬ್ದಾರಿಯಿಂದ ಹೇಳಿದ್ದು, ಅವರು ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂಬುದು ಇದರಿಂದ ವೇದ್ಯವಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮ  ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು. ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಕುಮಾರಸ್ವಾಮಿ ಸತ್ಯಕ್ಕೆ ಅಪಚಾರವಾಗುವಂತಹ ಆಪಾದನೆ ಮಾಡಿದ್ದಾರೆ. ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ. ಗೃಹ ಸಚಿವನಾದ ನನ್ನನ್ನು  ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ  ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Join Whatsapp