ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ: ಡಿಕೆ ಶಿವಕುಮಾರ್

Prasthutha|

ಮಂಡ್ಯ: ಹೆಚ್.ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

- Advertisement -


ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು.


ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್ ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.



Join Whatsapp