ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ: ಡಿಕೆ ಸುರೇಶ್’ಗೆ ಕುಮಾರಸ್ವಾಮಿ ತಿರುಗೇಟು

Prasthutha|

ರಾಮನಗರ: ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

- Advertisement -

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ದೇಶ ವಿಭಜನೆ ಹೇಳಿಕೆ ಬಗ್ಗೆ ಬಿಡದಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ. ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

Join Whatsapp