ಕುಟುಂಬದ ಎಷ್ಟು ಜನ ರಾಜಕಾರಣಕ್ಕೆ ಬರಬೇಕೆಂಬ ಕಾನೂನು ಜಾರಿ ಮಾಡಲಿ: ಕುಮಾರಸ್ವಾಮಿ

Prasthutha|

ಮೈಸೂರು: ಒಂದು ಕುಟುಂಬದಿಂದ ಎಷ್ಟು ಜನ ರಾಜಕಾರಣಕ್ಕೆ ಬರಬೇಕು ಎಂಬ ಕಾನೂನು ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ಬಗ್ಗೆ ಟೀಕೆ ಮಾಡುವ ಬಿಜೆಪಿ- ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ಕಾನೂನು ಜಾರಿ ಮಾಡಲಿ. ತಮ್ಮ ಸಾಮರ್ಥ್ಯದಿಂದ ಸಂವಿಧಾನ ತಿದ್ದುಪಡಿ ಮಾಡಲಿ. ಕುಟುಂಬದ ಎಷ್ಟು ಜನ ರಾಜಕಾರಣಕ್ಕೆ ಬರಬೇಕು ಎಂಬ ನಿಯಮ ಮಾಡಲಿ ಎಂದು ಸವಾಲು ಹಾಕಿದರು.


“ಜೆಡಿಎಸ್ ಅಲ್ಲ ಜೆಡಿಎಫ್ ಪಕ್ಷ ” ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮಗ ಶಾಸಕರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಕುಟುಂಬದ ನಾಲ್ವರು ರಾಜಕಾರಣದಲ್ಲಿದ್ದಾರೆ. ಸಿದ್ದರಾಮಯ್ಯ ಮಗ ಅಕಾಲಿಕ ಮರಣಕ್ಕೀಡಾದರು. ಅವರು ಸಹ ಸಕ್ರಿಯ ರಾಜಕಾರಣದಲ್ಲಿದ್ದರು. ರಾಜ್ಯ -ರಾಷ್ಟ್ರಕಾರಣದಲ್ಲಿ ಹಲವರು ಈ ರೀತಿ ಇದ್ದಾರೆ” ಎಂದು ಹೇಳಿದರು.

Join Whatsapp