ಮಂಗಳೂರು: ನ್ಯಾಯಾಲಯದಿಂದ ವಾರೆಂಟ್ ಇದ್ದಾಗ್ಯೂ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ.
ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ.
ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ ತಲೆಮರೆಸಿಕೊಂಡಿದ್ದ. ಆತನನ್ನು ಮಾರ್ಚ್ 15ರಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗೆ ಆರು ತಿಂಗಳ ಕಾರಾಗೃಹ ವಾಸ ಹಾಗೂ 10,000 ರೂಪಾಯಿ ಜುಲ್ಮಾನೆ ವಿಧಿಸಿದೆ