ಕುಮಾರಸ್ವಾಮಿ, ನಿಖಿಲ್ ಅವರನ್ನು ಉಚ್ಚಾಟನೆ ಮಾಡಿ: ಸಿ.ಎಂ ಇಬ್ರಾಹಿಂ ಸಭೆಯಲ್ಲಿ ಆಗ್ರಹ

Prasthutha|

ಬೆಂಗಳೂರು: ಜೆಡಿಎಸ್-ಬಿಜೆಪಿ ಮೈತ್ರಿಗೆ ಜೆಡಿಎಸ್ ನ ಕೆಲ ಮುಖಂಡರು ಅಸಮಾಧಾನಗೊಂಡಿದ್ದು, ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಚಿಂತನ ಮಂಥನ ಸಭೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡಿ ಎಂಬ ಕೂಗು ಕೇಳಿ ಬಂದಿದೆ.

- Advertisement -


ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ವರಿಷ್ಠರ ನಡೆಯಿಂದ ಬೇಸರಗೊಂಡಿರುವ ಸಿ.ಎಂ. ಇಬ್ರಾಹಿಂ ತಮ್ಮ ಬೆಂಬಲಿಗರು ಹಾಗೂ ಹಿತೈಷಿಗಳ ಜೊತೆ ಜೆಡಿಎಸ್ ಚಿಂತನ ಮಂಥನ ಹೆಸರಿನಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡಿ ಎಂಬ ಕೂಗು ಕೇಳಿ ಬಂದಿದೆ. ಮೈಸೂರಿನ ನರಸಿಂಹರಾಜ ಕ್ಷೇತ್ರದ ಪರಾಜಿತ ಅಭ್ಯರ್ಥಿ ಶಾಹಿದ್, ಹೆಚ್ಡಿ ಕುಮಾರಸ್ವಾಮಿಯವರನ್ನೇ ಉಚ್ಚಾಟನೆ ಮಾಡಿ ಎಂದು ಧ್ವನಿ ಎತ್ತಿದ್ದಾರೆ.

Join Whatsapp