ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ

Prasthutha|

ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

- Advertisement -


ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ ಕೊಠಡಿಗೆ ಆಗಮಿಸಿದ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಜಿಟಿ ದೇವೇಗೌಡ, ಭೋಜೇಗೌಡರು ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಗೆದ್ದ ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿ ನೇಮಕವಾಗಿದ್ದಾರೆ

Join Whatsapp