ಕಲಿಸುವ ಗುರು ಬೀದಿಯಲ್ಲಿ ನಿಂತಿರುವಾಗ ಭಾರತ ವಿಶ್ವಗುರುವಾಗಲು ಹೇಗೆ ಸಾಧ್ಯ: HDK ಪ್ರಶ್ನೆ

Prasthutha|

- Advertisement -

ಬೆಂಗಳೂರು: ಕಲಿಸುವ ಗುರು ಬೀದಿಯಲ್ಲಿ ನಿಂತಿರುವಾಗ ಭಾರತ ವಿಶ್ವಗುರುವಾಗಲು ಹೇಗೆ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಭಾರತ ವಿಶ್ವಗುರು ಆಗಬೇಕು ಎನ್ನುತ್ತೀರಿ, ರಾಷ್ಟ್ರೀಯ ಶಿಕ್ಷಣದ ಮೂಲಕ ಭಾರತ ಜ್ಞಾನದ ಕಾಶಿ ಆಗಬೇಕು ಎನ್ನುತ್ತೀರಿ, ಕರ್ನಾಟಕವು ಭಾರತದ ಶೈಕ್ಷಣಿಕ ರಾಜಧಾನಿ ಆಗಬೇಕು ಎನ್ನುತ್ತೀರಿ. 9,881 ಅತಿಥಿ ಉಪನ್ಯಾಸಕರನ್ನು ಕಿತ್ತೊಗೆಯುವ ಮೂಲಕ ಇದನ್ನು ಸಾಧನೆ ಮಾಡಲಾಗುತ್ತದಾ? ಎಂದು ಕೇಳಿದ್ದಾರೆ.

- Advertisement -

 ದೇಶ ಕಟ್ಟುವುದರಲ್ಲಿ ಶಿಕ್ಷಣವೇ ನಿರ್ಣಾಯಕ. ಆ ಶಿಕ್ಷಣ ವ್ಯವಸ್ಥೆಗೆ ಗುರುವೇ ನಾಯಕ. ಆದರೆ ಇಂದು ಕಲಿಸುವ ಗುರುವು ದಿಕ್ಕಿಲ್ಲದೆ ಬೀದಿಯಲ್ಲಿ ನಿಂತಿದ್ದಾನೆ. ಸರಕಾರ ಹೇಳುವುದು ಒಂದು, ಮಾಡುವುದು ಇನ್ನೊಂದು. ಅತಿಥಿ ಉಪನ್ಯಾಸಕರಲ್ಲಿ 9,881 ಮಂದಿ ಉದ್ಯೋಗಕ್ಕೆ ಕುತ್ತು ಉಂಟಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಕ್ರಮ ವಹಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

Join Whatsapp