ಬೆಂಗಳೂರು: ಕಾಲ್ಪನಿಕ ಪಾತ್ರಗಳಾದ ಉರಿಗೌಡ, ನಂಜೇಗೌಡ ಹೆಸರಲ್ಲಿ ಸಿನಿಮಾ ಮಾಡಬಹುದು, ಹಣ ಮಾಡಬಹುದು ಅಷ್ಟೇ. ಬೇರೆ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಉರಿಗೌಡ, ನಂಜೇಗೌಡ ಇದ್ದರೋ ಇಲ್ಲವೋ ಗೊತ್ತಿಲ್ಲ. ಜೀವಂತ ಬದುಕಿರುವ ಉರಿಗೌಡ, ನಂಜೇಗೌಡರ ಬಗ್ಗೆ ಯೋಚಿಸಬೇಕು ಎಂದು ರೈತರನ್ನು ಉಲ್ಲೇಖಿಸಿ ಹೇಳಿದರು.
ಇವೆರೆಡೂ ಹೆಸರುಗಳು ಕಾಲ್ಪನಿಕ ಅಷ್ಟೇ. ಈ ಇಬ್ಬರ ಹೆಸರಲ್ಲಿ ಸಿನಿಮಾ ಮಾಡಬಹುದು, ಹಣ ಮಾಡಬಹುದು ಅಷ್ಟೇ. ಬೇರೆ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಅವರು ಕಿಡಿಕಾರಿದರು.

ಇತಿಹಾಸದಲ್ಲಿ ಇಲ್ಲದ ಉರಿಗೌಡ, ನಂಜೇಗೌಡ ಹೆಸರುಗಳನ್ನು ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿ, ಜೀವಂತ ಇರುವ ಉರಿಗೌಡ, ನಂಜೇಗೌಡ ಅವರನ್ನು ಕೋಮು ದಳ್ಳುರಿಯಲ್ಲಿ ಬೇಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.