ಒಂದೆಡೆ ಸರ್ಕಾರದಿಂದಲೇ ದೇಗುಲಗಳ ತೆರವು; ಇನ್ನೊಂದೆಡೆ ಬಿಜೆಪಿಗರಿಂದಲೇ ಪ್ರತಿಭಟನೆ: ಕುಮಾರಸ್ವಾಮಿ ಆಕ್ರೋಶ

Prasthutha|

ಬೆಂಗಳೂರು: ಒಂದೆಡೆ ರಾಜ್ಯ ಬಿಜೆಪಿ ಸರ್ಕಾರವೇ ದೇಗುಲಗಳನ್ನು ತೆರವುಗೊಳಿಸುತ್ತಿದ್ದು, ಇನ್ನೊಂದೆಡೆ ಬಿಜೆಪಿಗರೇ ಪ್ರತಿಬಟನೆ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಿಂದಲೇ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹೀಗಿರುವಾಗ ರಾಜ್ಯದಲ್ಲಿ ಒಂದೆಡೆ ದೇವಾಲಯಗಳನ್ನು ತೆರವು ಮಾಡಿಸುತ್ತಿದ್ದಾರೆ, ಇನ್ನೊಂದೆಡೆ ಬಿಜೆಪಿ ನಾಯಕರೇ ದೇವಾಲಯಗಳ ತೆರವು ವಿರೋಧಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಜನರನ್ನು ಡೈವರ್ಟ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಹಿಂದೂ ಜಾಗರಣ ಸಮಿತಿ ಎಂಬುದು ಬಿಜೆಪಿ ಅಂಗಪಕ್ಷ. ಅವರೇ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾರ ವಿರುದ್ಧ ಪ್ರತಿಭಟನೆ? ಇಂತಹ ದ್ವಿಮುಖ ನೀತಿ ಅನುಸರಿಸುತ್ತಿರುವುದಾದರೂ ಯಾಕೆ ಎಂದು ಪ್ರಶ್ನಿಸಿದ್ದಾರೆ.

ದೇವಾಲಯಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದರೆ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಬೇಕಿತ್ತು. ದೇವಾಲಯಗಳ ತೆರವು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಪರ್ಯಾಯ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಅದನ್ನು ಬಿಟ್ಟು ಜನರನ್ನು ಗೊಂದಲಕ್ಕೀಡು ಮಾಡಲು ಹೊರಟಿರುವುದು ಸರಿಯಲ್ಲ. ಈಗಲೂ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸಲಿ ಎಂದು ಅವರು ಹೇಳಿದರು.

Join Whatsapp