ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತರಿಗೆ ಬೆದರಿಕೆ ಹಾಕಿ ತನಿಖೆಯನ್ನು ದಿಕ್ಕು ತಪ್ಪಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡರು ವಿಶೇಷ ತನಿಖಾ ತಂಡಕ್ಕೆ ದೂರು ಸಲ್ಲಿಸಿದ್ದಾರೆ.
ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವು ಮಹಿಳೆಯರು ಸಂತ್ರಸ್ತೆಯರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗ, ಕುಮಾರಸ್ವಾಮಿ ಸಂತ್ರಸ್ತೆಯರ ಸ್ಥಳವನ್ನು ಬಹಿರಂಗಪಡಿಸುತ್ತಿದ್ದಾರೆ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಜನರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕಾರಣಕ್ಕಾಗಿಯೇ ಸಂತ್ರಸ್ತೆಯರು ದೂರು ನೀಡಲು ಮುಂದೆ ಬರುತ್ತಿಲ್ಲ ಎಂದು ಆರೋಪಿಸಲಾಗಿದೆ.