Home ಟಾಪ್ ಸುದ್ದಿಗಳು ಕುಮಾರಸ್ವಾಮಿ ಪೆನ್ ಡ್ರೈವ್ ಬಾಂಬ್; ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ: ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ಪೆನ್ ಡ್ರೈವ್ ಬಾಂಬ್; ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.


ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ನಾನು ಆ ಸರ್ಕಾರದಲ್ಲಿ ಸಚಿವನಾಗಿದ್ದೆ. ಅವರು ಪ್ರೋಗ್ರೆಸ್ಸಿವ್ ಆಗಿ ಮಾತನಾಡುತ್ತಿದ್ದವರು ಈಗ ಯಾಕೆ ಹೀಗಾಗಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ಹಾಗೂ ಜೆಡಿಎಸ್ ಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.


ಕುಮಾರಸ್ವಾಮಿ ಬಳಿ ಇರುವ ಪೆನ್ ಡ್ರೈವ್ ಏನಾಗಿದೆ ? ಅದು ಎಸ್ ಪಿ ರೋಡ್ ಪೆನ್ಡ್ರೈವ್ ಇರಬೇಕು ಎಂದು ಹೇಳಿದ್ದಾರೆ.
ಇನ್ನೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಸಚಿವರ ಹಾಗೂ ಶಾಸಕರ ನಡುವೆ ಹೊಂದಾಣಿಕೆ ಇಲ್ಲ ಎಂಬ ವಿಚಾರದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದ ಅವರು, ಹಿರಿಯರು ಯಾಕೆ ಹೀಗೆ ಹೇಳಿದರು ಗೊತ್ತಾಗುತ್ತಿಲ್ಲ ನಾನು ಸಚಿವನಾಗಿ ಅವರು ಹೇಳಿದ ಕೆಲಸ ಮಾಡಿಕೊಟ್ಟಿದ್ದೇನೆ ಎಂದು ಹೇಳಿದರು.

Join Whatsapp
Exit mobile version