ಜರ್ಮನಿ ಯುವತಿಯನ್ನು ವರಿಸಿದ ಕುಂದಾಪುರ ಯುವಕ

Prasthutha|

ಕುಂದಾಪುರ: ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ, ಜರ್ಮನಿ ಯುವತಿ ಜೊತೆ ವಿವಾಹ ಮಾಡಿಕೊಂಡಿದ್ದಾರೆ.

- Advertisement -

ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಣೆ ಏರಿದ್ದು, ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು.

ಚಂದನ್ ಹಾಗೂ ಜರ್ಮನಿಯ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ. ಚಂದನ್ ಅವರು ಜರ್ಮನಿಯಲ್ಲಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ನಡೆಸಿದ್ದರು. ಉಭಯ ಕುಟುಂಬದವರು ಪರಸ್ಪರ ಚರ್ಚಿಸಿ ಈ ಜೋಡಿಯ ಮದುವೆಗೆ ಸಮ್ಮತಿಸಿದ್ದರು.

Join Whatsapp