ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

Prasthutha|

ಕುಂದಾಪುರ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು, ನೀರಿನ‌ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ದಾರುಣ ಘಟನೆ ಕುಂದಾಪುರ ತಾಲೂಕಿನ ಅಮಾಸಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಎಂದು ಗುರುತಿಸಲಾಗಿದೆ.
ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ಕಳೀನಜೆಡ್ಡು ಹೊಳೆಯಲ್ಲಿ ಸ್ನಾನಕ್ಕೆಂದು ನೀರಿಗಿಳಿದಾಗ, ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾರೆನ್ನಲಾಗಿದೆ. ಇದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾದರೂ‌ ಕೂಡ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಜಿ ಜಿ.ಪಂ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ ಸ್ಥಳಕ್ಕಾಗಮಿಸಿದರು. ಮೃತ ಯುವಕರ ಸಂಬಂಧಿಗಳ ರೋಧನ ಮುಗಿಲು ಮುಟ್ಟಿದೆ.

Join Whatsapp