ರಾಜ್ಯಸಭೆ ಚುನಾವಣೆ: ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ, ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

Prasthutha|

ಬೆಂಗಳೂರು: ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಕುಪೇಂದ್ರ ರೆಡ್ಡಿ ಅವರು ಮಂಗಳವಾರ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರಾದ ಎಚ್.ಡಿ.ರೇವಣ್ಣ, ಎ.ಟಿ.ರಾಮಸ್ವಾಮಿ, ತಿಪ್ಪೇಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

- Advertisement -


ಇದೇ ವೇಳೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

Join Whatsapp