ಕುವೈತ್ ಅಗ್ನಿ ಅವಘಡ: ಮೃತ ಕೇರಳೀಯರ ಕುಟುಂಬಗಳಿಗೆ ₹5 ಲಕ್ಷ ನೆರವು

Prasthutha|

ತಿರುವನಂತಪುರಂ: ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕೇರಳದ ಮೂಲದ ನಾಗರಿಕರ ಕುಟುಂಬಗಳಿಗೆ ತಲಾ ₹5 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಇಲ್ಲಿನ (ಕೇರಳ) ಸರ್ಕಾರ ಗುರುವಾರ ಹೇಳಿದೆ.

- Advertisement -


ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


ಅಧಿಕೃತ ಮಾಹಿತಿ ಪ್ರಕಾರ ಅವಘಡದಲ್ಲಿ ಕೇರಳದ 19 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ₹4 ಲಕ್ಷ ಆರ್ಥಿಕ ನೆರವು ನೀಡಲು ಕ್ಯಾಬಿನೆಟ್ ನಿರ್ಧರಿಸಿದೆ. ಅಲ್ಲದೇ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರನ್ನು ತಕ್ಷಣವೇ ಕುವೈತ್ ಗೆ ಕಳುಹಿಸಲು ನಿರ್ಧರಿಸಲಾಗಿದೆ.

Join Whatsapp