Home ಟಾಪ್ ಸುದ್ದಿಗಳು ಸಿಎಂ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ

ಸಿಎಂ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ

ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ.


ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ.


ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

Join Whatsapp
Exit mobile version