Home ಟಾಪ್ ಸುದ್ದಿಗಳು ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಬಲಿ

ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಗುರುವಾರ ನಡೆದಿದೆ.

ತೋಟದ ಕೆಲಸಕ್ಕೆ ಹೋದ ಅರ್ಜುನ್(47) ಮೃತಪಟ್ಟವರು. ಒಂಟಿ ಸಲಗ ಅವರ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ ಎನ್ನಲಾಗಿದೆ.

ಊರುಬಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು,ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗೋಣಿಬೀಡು ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Join Whatsapp
Exit mobile version