ಲಖಿಂಪುರ| ಸಾಕ್ಷಿಗಳ ಸಂಖ್ಯೆ ಕಡಿಮೆಯಾಗಲು ಕಾರಣವೇನು?: ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

Prasthutha|

ಹೊಸದಿಲ್ಲಿ: ಲಖಿಂಪುರ ಖೇರಿಯಲ್ಲಿ ಕಾರು ಹರಿಸಿ ರೈತರನ್ನು ಹತ್ಯೆಗೈದ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಹರಿಹಾಯ್ದಿದೆ.

- Advertisement -

ಸಾಕ್ಷಿಗಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ಟೀಕಿಸಿದ ಸುಪ್ರೀಂ ಕೋರ್ಟ್, ಸಾಕ್ಷಿಗಳ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಲು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹೆಚ್ಚಿನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುವಂತೆ ಯೋಗಿ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಘಟನಾ ಸ್ಥಳದಲ್ಲಿ ಸಾವಿರಾರು ಮಂದಿ ಇದ್ದರೂ ಸಾಕ್ಷಿಗಳ ಸಂಖ್ಯೆ ಕಡಿಮೆಯಾಗಲು ಕಾರಣವೇನು? ಎಂದು ಸುಪ್ರೀಂ ಕೋರ್ಟ್ ಕೇಳಿದೆ.

- Advertisement -

ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ತೀವ್ರವಾಗಿ ಟೀಕಿಸಿದ್ದಾರೆ.
ಇಷ್ಟು ದೊಡ್ಡ ರೈತರ ರ್ಯಾಲಿ ವೇಳೆ ನಡೆದ ಘಟನೆಯಲ್ಲಿ ಕೇವಲ 23 ಮಂದಿ ಪ್ರತ್ಯಕ್ಷದರ್ಶಿಗಳು ಮಾತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ. ಘಟನಾ ಸ್ಥಳದಲ್ಲಿ 4,000 ರಿಂದ 5,000 ಜನರು ಇದ್ದರು ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು.



Join Whatsapp