ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಹರಿದ ವಾಹನ: ವೀಡಿಯೋ ವೈರಲ್

Prasthutha|

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಹರಿದ ವಾಹನದ ವೀಡಿಯೋ ವೈರಲ್ ಆಗಿದೆ.
ವಾಹನ ಹಿಂದಿನಿಂದ ಗುದ್ದುತ್ತಿದ್ದಂತೆ ರೈತರು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬೀಳುತ್ತಿರುವ ಆಘಾತಕಾರಿ ದೃಶ್ಯ ವೀಡಿಯೋದಲ್ಲಿದೆ. ರೈತರೊಬ್ಬರು ವಾಹನದ ಬಾನೆಟ್ ಮೇಲೆ ಬಿದ್ದು, ಅಲ್ಲಿಂದ ರಸ್ತೆಗೆ ಬೀಳುತ್ತಾರೆ. ಅದರ ಹಿಂದೆಯೇ ಮತ್ತೊಂದು ಎಸ್ಯುವಿ ಸೈರನ್ ಮಾಡುತ್ತ, ಬಿದ್ದ ರೈತರನ್ನು ಗಮನಿಸದೆಯೇ ಸಾಗುತ್ತದೆ.

- Advertisement -
https://twitter.com/i/status/1445087604194484229


ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲೂ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಇದು ಲಖಿಂಪುರ–ಖೇರಿಯ ಘಟನೆಯೇ ಅಥವಾ ಇಲ್ಲವೇ ಎಂಬುದನ್ನು ಪೊಲೀಸರು ಇನ್ನಷ್ಟೇ ಪರಿಶೀಲಿಸಬೇಕಿದೆ. ವಿಡಿಯೊ ಗುಣಮಟ್ಟ ಕಡಿಮೆ ಇರುವುದರಿಂದ ವಾಹನವನ್ನು ಯಾರು ಚಲಾಯಿಸುತ್ತಿದ್ದರು ಎಂಬುದು ಸ್ಪಷ್ಟವಾಗಿ ಕಾಣುವುದಿಲ್ಲ.

Join Whatsapp