ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

Prasthutha|

ಲಖನೌ: ಲಖಿಂಪುರ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

- Advertisement -

ನ್ಯಾಯಮೂರ್ತಿ ಕೃಷ್ಣ ಪಹಲ್ ಅವರ ಪೀಠವು ವಿಚಾರಣೆಯನ್ನು ಪೂರ್ತಿಗೊಳಿಸಿದ ನಂತರ ಜುಲೈ 15 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಲಖನೌ ಪೀಠ ಫೆಬ್ರವರಿ 10, 2022 ರಂದು ಆಶಿಶ್’ಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ನಂತರ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಮ್ ಕೋರ್ಟ್ ಜಾಮೀನು ರದ್ದುಗೊಳಿಸಿತ್ತು ಮತ್ತು ಆತನ ಜಾಮೀನು ಅರ್ಜಿಯನ್ನು ನಿರ್ಧರಿಸಲು ಹೈಕೋರ್ಟ್’ಗೆ ನಿರ್ದೇಶಿಸಿತ್ತು.

- Advertisement -

ಕಳೆದ ವರ್ಷ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ನಾಲ್ವರು ರೈತರು ಮತ್ತು ಪತ್ರಕರ್ತರ ಕೊಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾನೆ.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.



Join Whatsapp