Home ಟಾಪ್ ಸುದ್ದಿಗಳು ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

ಲಖನೌ: ಲಖಿಂಪುರ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ ಕೃಷ್ಣ ಪಹಲ್ ಅವರ ಪೀಠವು ವಿಚಾರಣೆಯನ್ನು ಪೂರ್ತಿಗೊಳಿಸಿದ ನಂತರ ಜುಲೈ 15 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಲಖನೌ ಪೀಠ ಫೆಬ್ರವರಿ 10, 2022 ರಂದು ಆಶಿಶ್’ಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ನಂತರ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಮ್ ಕೋರ್ಟ್ ಜಾಮೀನು ರದ್ದುಗೊಳಿಸಿತ್ತು ಮತ್ತು ಆತನ ಜಾಮೀನು ಅರ್ಜಿಯನ್ನು ನಿರ್ಧರಿಸಲು ಹೈಕೋರ್ಟ್’ಗೆ ನಿರ್ದೇಶಿಸಿತ್ತು.

ಕಳೆದ ವರ್ಷ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ನಾಲ್ವರು ರೈತರು ಮತ್ತು ಪತ್ರಕರ್ತರ ಕೊಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾನೆ.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

Join Whatsapp
Exit mobile version