ಲಖಿಂಪುರ್ ಹಿಂಸಾಚಾರ| ಆಶಿಶ್ ಮಿಶ್ರಾ ಮೂರು ದಿನಗಳ ಪೊಲೀಸ್ ಕಸ್ಟಡಿಗೆ

Prasthutha|

ಲಖ್ನೋ: ಲಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆಶಿಶ್ ಮಿಶ್ರಾ ನನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

- Advertisement -

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ನನ್ನು ಕನಿಷ್ಠ ಒಂದು ವಾರದವರೆಗೆ ಕಸ್ಟಡಿಗೆ ನೀಡಬೇಕು ಎಂದು ತನಿಖಾ ತಂಡ ಕೇಳಿಕೊಂಡಾಗ ಲಖಿಂಪುರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂರು ದಿವಸಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಮೊದಲು ತನಿಖಾ ತಂಡವು ಆಶಿಶ್ ಮಿಶ್ರಾ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿತ್ತು.

ಆಶಿಶ್ ನನ್ನು 11 ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

- Advertisement -

ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಒಬ್ಬ ರೈತ ಸೇರಿದಂತೆ ಒಂಬತ್ತು ಮಂದಿಯ ಸಾವಿಗೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಕಾರಣನಾಗಿದ್ದನು.



Join Whatsapp