ಲಖಿಂಪುರ ಹಿಂಸಾಚಾರ| ನಾಳೆ ರಾಷ್ಟ್ರಪತಿಯನ್ನು ಭೇಟಿಯಾಗಲಿರುವ ರಾಹುಲ್ ಗಾಂಧಿ

Prasthutha|

ನವದೆಹಲಿ: ಉತ್ತರಪ್ರದೇಶ ಲಖಿಂಪುರ ಖೇರಿಯಲ್ಲಿ ರೈತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ (ಬುಧವಾರ) ಬೆಳಗ್ಗೆ 11.30 ಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ರನ್ನು ಭೇಟಿ ಮಾಡಲಿದ್ದಾರೆ.

- Advertisement -

ರಾಷ್ಟ್ರಪತಿಗಳನ್ನು ಭೇಟಿ ಮಾಡಲು ಅನುಮತಿ ಲಭಿಸಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.  ಅಕ್ಟೋಬರ್ 3 ರಂದು ನಡೆದ ರೈತರ ಹತ್ಯಾಕಾಂಡ ದೇಶವನ್ನೇ ಬೆಚ್ಚಿಬೀಳಿಸಿತ್ತು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ನಾಲ್ಕು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಕಾರಣನಾಗಿದ್ದನು.



Join Whatsapp