ಲಖಿಂಪುರ್ ಹಿಂಸಾಚಾರ| ತನಿಖೆಯ ಮೇಲ್ವಿಚಾರಣೆಯ ಬಗ್ಗೆ ನಿಲುವು ತಿಳಿಸಲು ಆದಿತ್ಯನಾಥ್ ಸರ್ಕಾರಕ್ಕೆ ಸುಪ್ರೀಂ ಕಾಲಾವಕಾಶ

Prasthutha|

ಹೊಸದಿಲ್ಲಿ: ಲಖಿಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ನ್ಯಾಯಾಧೀಶರಿಂದ ಎಸ್ಐಟಿ ತನಿಖೆ ಮೇಲ್ವಿಚಾರಣೆ ನಡೆಸುವ ಸಲಹೆ ಸಂಬಂಧ ನಿಲುವು ಸ್ಪಷ್ಟಪಡಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರದವರೆಗೂ ಕಾಲಾವಕಾಶ ನೀಡಿದೆ.

- Advertisement -


ನನಗೆ ಸೋಮವಾರದವರೆಗೆ ಸಮಯ ಕೊಡುವರೇ? ನಾನು ಅದನ್ನು ಬಹುತೇಕ ಪೂರ್ಣಗೊಳಿಸಿದ್ದೇನೆ. ನಾವು ಏನಾದರೂ ಕೆಲಸ ಮಾಡುತ್ತಿದ್ದೇವೆ ಎಂದು ಉತ್ತರಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠಕ್ಕೆ ತಿಳಿಸಿದರು.


ಈ ವೇಳೆ ವಿಚಾರಣೆಯನ್ನು ಸೋಮವಾರಕ್ಕೆ ಪಟ್ಟಿ ಮಾಡಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಮನವಿಗೆ ಸಮ್ಮತಿಸಿತು.
ನವೆಂಬರ್ 8 ರಂದು ಸುಪ್ರೀಂ ಕೋರ್ಟ್ ಲಖಿಂಪುರ ಖೇರಿ ಹಿಂಸಾಚಾರ ತನಿಖೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿತ್ತು, ಈಗ ನಡೆಯುತ್ತಿರುವ ತನಿಖೆಯಲ್ಲಿ ಸ್ವಾತಂತ್ರ್ಯ, ನಿಷ್ಪಕ್ಷಪಾತ ಮತ್ತು ನ್ಯಾಯಸಮ್ಮತತೆಯನ್ನು ತುಂಬಲು ಬೇರೆ ಹೈಕೋರ್ಟ್ನ ಮಾಜಿ ನ್ಯಾಯಾಧೀಶರು ಇದನ್ನು ದಿನನಿತ್ಯದ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಬೇಕು ಎಂದು ನ್ಯಾಯಾಲಯ ಸೂಚಿಸಿತ್ತು.
ಸರ್ಕಾರರದ ಮೇಲೆ ತನಗೆ ವಿಶ್ವಾಸವಿಲ್ಲ ಎಂದ ನ್ಯಾಯಪೀಠ, ರಾಜ್ಯವು ನೇಮಿಸಿದ ಏಕಸದಸ್ಯ ನ್ಯಾಯಾಂಗ ಆಯೋಗವು ಪ್ರಕರಣದ ತನಿಖೆಯನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ಹೇಳಿತ್ತು.

- Advertisement -


ಲಖಿಂಪುರ ಖೇರಿ ಜಿಲ್ಲೆಯ ಟಿಕೋನಿಯಾ-ಬನ್ಬೀರ್ಪುರ ರಸ್ತೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರನ್ನು ರಾಜ್ಯ ಸರ್ಕಾರರ ಹೆಸರಿಸಿದೆ.
ಬೇರೆ ಹೈಕೋರ್ಟ್ನ ಮಾಜಿ ನ್ಯಾಯಾಧೀಶರಿಂದ ತನಿಖೆಯ ಮೇಲ್ವಿಚಾರಣೆಯ ಸಲಹೆಯ ಮೇರೆಗೆ ರಾಜ್ಯ ಸರಕಾರವು ತನ್ನ ನಿಲುವನ್ನು ತಿಳಿಸುವಂತೆ ಕೇಳಿದೆ.


ಅಕ್ಟೋಬರ್ 3ರಂದು ನಡೆದಿದ್ದ ಈ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.



Join Whatsapp