ಲಖೀಂಪುರ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಲಖೀಂಪುರ ಖೇರಿ ಸಂತ್ರಸ್ತೆಯ ತಂದೆ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಕಾಯ್ದಿರಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ಪೀಠದ 45 ನಿಮಿಷಗಳ ಸುದೀರ್ಘ ವಿಚಾರಣೆಯ ನಂತರ ಈ ತೀರ್ಮಾನಕ್ಕೆ ಬರಲಾಯಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ಜಾಮೀನು ಅನುಮತಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲು ಉತ್ತರ ಪ್ರದೇಶಕ್ಕೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶಿಫಾರಸು ಮಾಡಿರುವುದಾಗಿ ತಿಳಿಸಿದೆ.



Join Whatsapp