Home ಟಾಪ್ ಸುದ್ದಿಗಳು ಲಖೀಂಪುರ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಲಖೀಂಪುರ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಲಖೀಂಪುರ ಖೇರಿ ಸಂತ್ರಸ್ತೆಯ ತಂದೆ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಕಾಯ್ದಿರಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ಪೀಠದ 45 ನಿಮಿಷಗಳ ಸುದೀರ್ಘ ವಿಚಾರಣೆಯ ನಂತರ ಈ ತೀರ್ಮಾನಕ್ಕೆ ಬರಲಾಯಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ಜಾಮೀನು ಅನುಮತಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲು ಉತ್ತರ ಪ್ರದೇಶಕ್ಕೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶಿಫಾರಸು ಮಾಡಿರುವುದಾಗಿ ತಿಳಿಸಿದೆ.

Join Whatsapp
Exit mobile version