ಲಕ್ಷದ್ವೀಪ ಉಳಿಸಿ ಅಭಿಯಾನ : 93 ನಿವೃತ್ತ ಅಧಿಕಾರಿಗಳಿಂದ ಪ್ರಧಾನಿಗೆ ಪತ್ರ

Prasthutha|

ಕೊಚ್ಚಿ : ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್‌ ವಿವಾದಾತ್ಮಕ ನಿರ್ಧಾರಗಳ ವಿರುದ್ಧ ದೇಶದ ಹಿರಿಯ ನಿವೃತ್ತ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸುಮಾರು 93 ಹಿರಿಯ ನಿವೃತ್ತ ಅಧಿಕಾರಿಗಳು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಆತಂಕಕಾರಿ ಬೆಳವಣಿಗೆಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಲಕ್ಷದ್ವೀಪ ಪ್ರಜೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೊಸ ನಿಯಮಗಳನ್ನು ರೂಪಿಸಲಾಗುತ್ತದೆ.

- Advertisement -

ಪ್ರಫುಲ್‌ ಪಟೇಲ್‌ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಜನರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನರಿಗೆ ಸ್ಪಂದಿಸುವ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪ್ರಫುಲ್‌ ಪಟೇಲ್‌ ವಿರುದ್ಧ, ಲಕ್ಷದ್ವೀಪ ಉಳಿಸಿ ಅಭಿಯಾನ ಆರಂಭವಾಗಿದೆ.

- Advertisement -