ನವದೆಹಲಿ : ವಿವಾದಿತ ಹೊಸ ನಿಯಮಗಳನ್ನು ಜಾರಿ ತರಲು ಉದ್ದೇಶಿಸಿರುವುದನ್ನು ವಿರೋಧಿಸಿ ಲಕ್ಷದ್ವೀಪದಲ್ಲಿ ೧೨ ಗಂಟೆಗಳ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದ್ದು, ಜನತೆ ತಮ್ಮ ಮನೆಗಳ ಮುಂದೆಯೇ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ಕೆಲವರು ನೀರಿನೊಳಗೂ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪೋಸ್ಟ್ ಮಾಡುತ್ತಿದ್ದಾರೆ.
ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡ ಪಟೇಲ್ ಅವರ ವಿರುದ್ಧ ಆಕ್ರೋಶ ಹೊರಹಾಕಿರುವ ಜನತೆ, ವಿವಿಧ ಘೋಷಣೆಗಳುಳ್ಳ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ್ದಾರೆ. ಆಡಳಿತಾಧಿಕಾರಿ ಪ್ರಫುಲ್ ಖೋಡ ಪಟೇಲ್ ಲಕ್ಷದ್ವೀಪದಲ್ಲಿ ತರಲುದ್ದೇಶಿಸಿರುವ ಹೊಸ ಕಾನೂನುಗಳ ಬಗ್ಗೆ ಜನರಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಇಲ್ಲಿ ಕೆಲವು ಅಂತಹ ಫೋಟೊಗಳನ್ನು ಇಲ್ಲಿ ಹಾಕಲಾಗಿದೆ.