ಮೈಸೂರು: ಸಂಸದ ಪ್ರತಾಪ್ ಸಿಂಹ ಹಾಗೂ ಕೈ ವಕ್ತಾರ ಲಕ್ಷ್ಮಣ್ ನಡುವಿನ ವಾಕ್ಸಮರ ಕೊನೆ ಹಂತಕ್ಕೆ ಬಂದು ನಿಂತಿದೆ. ಮೈಸೂರು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ನೀಡಿದ್ಧ ಪಂಥಾಹ್ವಾನಕ್ಕೆ ಸಿದ್ದರಾಮಯ್ಯ ಸೂಚನೆ ಮೇರೆಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಡೇಟ್ ಫಿಕ್ಸ್ ಮಾಡಿದ್ದಾರೆ ಎನ್ನಲಾಗಿದೆ.
ಜೂನ್ 29ರ ಮಧ್ಯಾಹ್ನ 12 ಗಂಟೆಗೆ ಮೈಸೂರು ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ದ ಎಂದು ಘೋಷಿಸಿದ ಲಕ್ಷ್ಮಣ್ ಸಂಸದರ ಜಲದರ್ಶಿನಿಯ ಕಚೇರಿ ಬಳಿ ದಾಖಲೆ ಸಮೇತ ಹಾಜರಾಗುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಪ್ರತಾಪ್ ಸಿಂಹ ಎದುರು ಚರ್ಚೆಗೆ ಬರುತ್ತಿದ್ದೇನೆ. ಎರಡನೇ ಬಾರಿಗೆ ಆಹ್ವಾನ ನೀಡುತ್ತಿದ್ದೂ ಈ ಬಾರಿ ಪಲಾಯನ ಮಾಡಬೇಡಿ. ಜನರಿಗೆ ಸತ್ಯ ಹೇಳಲು ಯಾರಾದರೇನು.? ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಮಣ್ ಸವಾಲು ಹಾಕಿದರು.