ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಲಕ್ಷ್ಮಣ ಸವದಿ

Prasthutha|

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಮತ್ತಿತರರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

- Advertisement -


ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಚಂದ್ರಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಎ ಬಿ ಪಾಟೀಲ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಅಕ್ಕಪ್ಪ ಮತ್ತಿತರರು ಉಪಸ್ಥಿತರಿದ್ದರು.

Join Whatsapp