ಸಂತೋಷ್ ಆತ್ಮಹತ್ಯೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡಾ ಕಾರಣ: ಭಾಸ್ಕರ್ ರಾವ್ ಆರೋಪ

Prasthutha|

ಬಾಗಲಕೋಟೆ; ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಈ ಬೆನ್ನಲ್ಲೇ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಪೊಲೀಸ್ ಕಮಿಷನರ್ ಹಾಗೂ ಆಪ್ ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಪರೋಕ್ಷವಾಗಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಾಸ್ಕರ್ ರಾವ್, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸ್ಥಳೀಯ ಕಾಂಗ್ರೆಸ್ ಶಾಸಕರೂ ಕೂಡ ಅಷ್ಟೇ ಕಾರಣ ಎಂದು ಹೇಳುವ ಮೂಲಕ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೆಸರು ಪ್ರಸ್ತಾಪ ಮಾಡದೆ ಪರೋಕ್ಷವಾಗಿ ಗಂಭೀರ ಆರೋಪ ಮಾಡಿದ್ದಾರೆ

Join Whatsapp