Home ಟಾಪ್ ಸುದ್ದಿಗಳು ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲು

ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರು ಪೇರು ಕಾಣಿಸಿಕೊಂಡಿದ್ದು, ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಿಂದೆ ಜೂನ್ 27 ರಂದು ಕೂಡ ಎಲ್ ಕೆ ಅಡ್ವಾಣಿ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಡಾ.ವಿನೀತ್ ಪುರಿ ಅವರು ಅಪೋಲೋ ಆಸ್ಪತ್ರೆಯಲ್ಲಿ ಎಲ್‌ಕೆ ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಿಜೆಪಿ ನಾಯಕನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.

ಕಳೆದ ವಾರವೂ ಭಾರತದ ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರನ್ನು ಜೂನ್‌ 26 ರಂದು ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾದ ಮರು ದಿನವೇ ಅವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದರು.

ಲಾಲ್ ಕೃಷ್ಣ ಅಡ್ವಾಣಿಗೆ 96ವರ್ಷ ವಯಸ್ಸಾಗಿದ್ದು, ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಆರೋಗ್ಯ ಏರುಪೇರಾಗುತ್ತಿದೆ.

Join Whatsapp
Exit mobile version