ನವದೆಹಲಿ: ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಝೋರಾಂ ಪೀಪಲ್ಸ್ ಮೂವ್ಮೆಂಟ್ (ಝಡ್ಪಿಎಂ) ನಾಯಕ ಲಾಲ್ದುಹೋಮಾ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಐಜ್ವಾಲ್ ನ ರಾಜಭವನ ಸಂಕೀರ್ಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಇತರ ಹಲವಾರು ಝಡ್ಪಿಎಂ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಿಜೋರಾಂನಲ್ಲಿ ನವೆಂಬರ್ ತಿಂಗಳನಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿ. ಇತ್ತೀಚೆಗಷ್ಟೇ ಫಲಿತಾಂಶವನ್ನು ಘೋಷಣೆ ಮಾಡಲಾಯಿತು. ZPM (ಝೋರಾಮ್ ಪೀಪಲ್ಸ್ ಮೂವ್ಮೆಂಟ್) ಪಕ್ಷ 40 ವಿಧಾನಸಭಾ ಕ್ಷೇತ್ರಗಳ ಪೈಕಿ 27 ಕ್ಷೇತ್ರದಲ್ಲಿ ಗೆದ್ದಿದೆ.