Home ಟಾಪ್ ಸುದ್ದಿಗಳು ಭಾರತಕ್ಕೆ ಪಂಗನಾಮ ಹಾಕಿ ಓಡಿದ ಲಲಿತ್ ಮೋದಿಯಿಂದ ರಾಹುಲ್ ಗಾಂಧಿ ವಿರುದ್ಧ ದೂರು

ಭಾರತಕ್ಕೆ ಪಂಗನಾಮ ಹಾಕಿ ಓಡಿದ ಲಲಿತ್ ಮೋದಿಯಿಂದ ರಾಹುಲ್ ಗಾಂಧಿ ವಿರುದ್ಧ ದೂರು

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲು ವಂಚನೆ ಆರೋಪಿ, ಭಾರತದಿಂದ ಪರಾರಿಯಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ನಿರ್ಧರಿಸಿದ್ದಾರೆ.


ತನ್ನನ್ನು ಆಗಾಗ ಕಳ್ಳ, ಪಲಾಯನವಾದಿ ಎಂದು ಹೇಳಿ ಮೂದಲಿಸುತ್ತಿರುವ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಲಂಡನ್’ನಲ್ಲಿ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ರಾಹುಲ್ ಗಾಂಧಿ ಮತ್ತು ಸಹಚರರು ಪದೇ ಪದೇ ನಾನು ದೇಶ ಬಿಟ್ಟು ಪರಾರಿಯಾಗಿರುವ ಕಾನೂನಿನ ಕೈಯಿಂದ ತಪ್ಪಿಸಿಕೊಂಡಿರುವವನೆಂದು ಹೇಳುತ್ತಿರುವುದು ಹೇಗೆ? ಏಕೆ? ನನ್ನ ವಿರುದ್ಧದ ಆರೋಪಗಳು ಸಾಬೀತಾಗಿವೆಯೇ. ವಿರೋಧ ಪಕ್ಷಗಳ ಎಲ್ಲ ನಾಯಕರಿಗೂ ತಪ್ಪು ಮಾಹಿತಿ ನೀಡಲಾಗಿದೆ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.


‘ರಾಹುಲ್ ಗಾಂಧಿಯವರನ್ನು ಬ್ರಿಟನ್ ನ್ಯಾಯಾಲಯಕ್ಕೆ ಎಳೆಯಲು ನಾನು ತಕ್ಷಣ ನಿರ್ಧರಿಸಿದ್ದೇನೆ. ಆಗ ಪಕ್ಕಾ ಪುರಾವೆಗಳೊಂದಿಗೆ ನ್ಯಾಯಾಲಯಕ್ಕೆ ಬರಬೇಕಾಗುತ್ತದೆ. ರಾಹುಲ್ ತನ್ನನ್ನು ತಾನು ಸಂಪೂರ್ಣ ಮೂರ್ಖನನ್ನಾಗಿಸಿಕೊಳ್ಳುವುದನ್ನು ಎದುರುನೋಡುತ್ತಿದ್ದೇನೆ’ ಎಂದಿದ್ದಾರೆ.

Join Whatsapp
Exit mobile version