ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವರು ಕೈತೊಳೆಯಲ್ಲ: ಬಿ ಟಿ ಲಲಿತಾ ನಾಯಕ್

Prasthutha|

- Advertisement -

ಗದಗ: ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು. ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮನೆಯಲ್ಲಿ ನೀರು ಇಲ್ವಾ? ಕೃಷ್ಣಯ್ಯ ಶೆಟ್ಟಿ ಗಂಗಾಜಲ ತಂದು ಕೊಟ್ಟರು, ಅಲ್ಲಿ ಹೆಣ ತೇಲುತ್ತೆ. ಅಲ್ಲಿ ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಮಂಗಳ ಮುಖಿಯರು ದೇವರು ಅಂತೆ? ಅದು ತಪ್ಪು. ಯಾರಾದರೂ ಒಂಟಿಯಾಗಿ ಸಿಕ್ಕರೆ ಎತ್ತಿಹಾಕಿಕೊಂಡು ಹೋಗಿ ಕೊಂದು ಬಿಡುತ್ತಾರೆ. ಅಷ್ಟೊಂದು ಹಿಂಸೆಯನ್ನು ನೀಡುತ್ತಾರೆ. ಸಾಕಷ್ಟು ಉದಾಹರಣೆ ಇವೆ. ಗಂಡಸರು ಕೂಡಾ ಆ ವೇಷವನ್ನು ಹಾಕಿಕೊಂಡು ಮಂಗಳಮುಖಿ ಅಂತಾರೆ. ಅವರನ್ನು ದುಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಹೇಳಿದರು.



Join Whatsapp