January 23, 2021

ಲಾಲು ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರ | ಏಮ್ಸ್ ಗೆ ಶಿಫ್ಟ್ ಮಾಡಲು ಸಿದ್ಧತೆ

ಪಾಟ್ನಾ : ಜೈಲಿನಲ್ಲಿರುವ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿಯಲ್ಲಿ ಬೀಡುಬಿಟ್ಟಿರುವ ಅವರ ಮಗ ಪುತ್ರ ಮತ್ತು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಮತ್ತು ಕುಟುಂಬ ರಾಷ್ಟ್ರ ರಾಜಧಾನಿಯ ಏಮ್ಸ್ ಗೆ ತೆರಳುವ ಸಾಧ್ಯತೆಯಿದೆ.

ಶ್ವಾಸಕೋಶ ಸಂಬಂಧಿತ ರೋಗದಿಂದ ಬಳಲುತ್ತಿರುವ ಲಾಲು ಪ್ರಸಾದ್ ಯಾದವ್, ಇದೀಗ ರೋಗ ಉಲ್ಬಣಗೊಂಡಿದೆ ಎನ್ನಲಾಗಿದೆ. ಲಾಲು ಅವನ್ನು ಏಮ್ಸ್ ಗೆ ಸ್ಥಳಾಂತರಿಸಲು ನ್ಯಾಯಾಲಯದ ಅನುಮತಿ ಪಡೆಯಲು ಜೈಲಾಧಿಕಾರಿ ಸಿದ್ಧತೆ ನಡೆಸಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿಯೊಂದಿಗೆ ಮಾತನಾಡಿ ತಂದೆಯ ಆರೋಗ್ಯಕ್ಕಾಗಿ ಉತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಯತ್ನಿಸುವುದಾಗಿ ತೇಜಸ್ವಿ ಯಾದವ್ ಹೇಳಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ