ಪಾಟ್ನಾ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ನಾಗರಿಕ ಕಲಹದತ್ತ ಸಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಅವರು. ಬಿಜೆಪಿಯ ಕಾರ್ಯವೈಖರಿಯನ್ನು ಗಮನಿಸಿದರೆ ದೇಶವು ನಾಗರಿಕ ಕಲಹದತ್ತ ಸಾಗುತ್ತಿರುವ ಸೂಚನೆ ಸಿಗುತ್ತಿದೆ. ದೇಶದಲ್ಲಿ ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಏಕತೆಯನ್ನು ಪ್ರದರ್ಶಿಸಲು ನಾನು ಕರೆ ನೀಡುತ್ತೇನೆ. ನಾವು ಒಗ್ಗಟ್ಟಾಗಿ ಹೋರಾಡಬೇಕು ಎಂದು ತಿಳಿಸಿದ್ದಾರೆ.
ಅಲ್ಲದೆ, ಜಾತ್ಯತೀತ ಸಿದ್ಧಾಂತಗಳನ್ನು ನಂಬಿರುವ ಪಕ್ಷಗಳು ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ಶಕ್ತವಾಗಿ ಹೋರಾಡಬೇಕು ಎಂದು ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಆಗ್ರಹಿಸಿದ್ದಾರೆ.