ಜಮೀನು ವಿವಾದ: ಯುವಕ ಬಲಿ

Prasthutha|

ಮೂಡಿಗೆರೆ; ಜಮೀನಿನ ರಸ್ತೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವನ ಬಲಿಯಾದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.

- Advertisement -

ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ.

ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಇಂದು ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ  ವಿವಾದಿತ ರಸ್ತೆಯಲ್ಲಿ ವಿರೋಧಿ ಗುಂಪಿನವರು ಕೆಲಸ ಮಾಡುತ್ತಿದ್ದಾಗ ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಗುಂಪು ಕತ್ತಿ ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

- Advertisement -

ತೀವ್ರ ಗಾಯಗೊಂಡಿದ್ದ ಪ್ರವೀಣ್  ಕೊನೆಯುಸಿರೆಳೆದಿದ್ದಾರೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ಚಿಕ್ಕಮಗಳೂರು ಆಸ್ಪತ್ರೆ ಒಯ್ಯಲಾಗಿದೆ.

ಈ ಸಂದರ್ಭದಲ್ಲಿ ಪ್ರವೀಣ್ ಅವರ ತಂದೆ ಲಕ್ಷ್ಮಣಗೌಡ ಅವರ ಬಲಗೈಗೂ ತೀವ್ರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.