ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ; ಮೂವರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್​ ಕೇಸ್

Prasthutha|

ಚಿಕ್ಕಮಗಳೂರು: ದಕ್ಷಿಣ ಕರ್ನಾಟಕದ ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ ಎಂಬ ಅಂಶ ಇತ್ತೀಚಿಗೆ ಬಯಲಾಗಿತ್ತು. ಈ ಸಂಬಂಧ 15 ಜನ ತಹಸಿಲ್ದಾರ್​​ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ಮಧ್ಯೆಯೇ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪದಡಿ ಮೂವರು ಅಧಿಕಾರಿಗಳ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ.

- Advertisement -

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ಮೇರೆಗೆ ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜು ಕಡೂರು ತಾಲೂಕು ಕಚೇರಿಯ ಹಿಂದಿನ ತಹಶಿಲ್ದಾರ್ ಉಮೇಶ್, ನಿವೃತ್ತ ಶಿರಸ್ತೆದಾರ್ ನಂಜುಂಡಯ್ಯ, ಆರ್​​ಐ ಕಿರಣ್ ಕುಮಾರ್ ವಿರುದ್ಧ ಅವರು ದೂರು ದಾಖಲಿಸಿದ್ದಾರೆ. ಇನ್ನು ಆರೋಪಿ ಉಮೇಶ್ ಸಧ್ಯ ಕಾರವಾರದ ಸೀಬರ್ಡ್ ನೌಕಾನೆಲೆ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ.

ಕಡೂರು ತಾಲೂಕಿನ ಉಳ್ಳಿನಾಗರ ಗ್ರಾಮದಲ್ಲಿ 5.4 ಎಕರೆ ಸರ್ಕಾರಿ ಭೂಮಿ ಕಬಳಿಕೆಗಾಗಿ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಂಜೂರು ಮಾಡಲಾಗಿತ್ತು. ಕ್ರಿಮಿನಲ್ ಕೇಸ್ ದಾಖಲಾಗುತ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ. ಕಡೂರು ಪೊಲೀಸರು ಉಮೇಶ್ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಭೂ ಕಂದಾಯ ಕಾಯ್ದೆ 1964ರ ಕಲಂ 192‌ A(2) ಸೆಕ್ಷನ್ ಅಡಿಯಲ್ಲಿ ಜಾಮೀನು ರಹಿತ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Join Whatsapp