ರೈತರ ಆಕ್ಷೇಪದ ನಡುವೆಯೂ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಗೆ ವಿಧಾನಪರಿಷತ್ ನಲ್ಲೂ ಅಂಗೀಕಾರ

Prasthutha|

ಬೆಂಗಳೂರು : ರಾಜ್ಯ ಸೇರಿದಂತೆ ದೇಶಾದ್ಯಂತ ಬಿಜೆಪಿಯ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ರೈತರಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿರುವ ನಡುವೆಯೇ, ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟಿದ್ದ ಭೂ ಸುಧಾರಣಾ ತಿದ್ದುಪಡಿ ಮಸೂದೆ ವಿಧಾನ ಪರಿಷತ್ ನಲ್ಲೂ ಅಂಗೀಕರಿಸಲ್ಪಟ್ಟಿದೆ.

ಈ ಮೂಲಕ ಕರ್ನಾಟಕದಲ್ಲಿ ಭೂ ಸುಧಾರಣಾ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಚಳಿಗಾಲದ ವಿಧಾನಮಂಡಲದ ಅಧಿವೇಶನ ಕಳೆದ ಎರಡು ದಿನಗಳಿಂದ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಸೇರಿದಂತೆ ವಿವಿಧ ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಇಂತಹ ಸಂದರ್ಭದಲ್ಲೂ ಬಿಜೆಪಿ ಸರಕಾರ ಮಸೂದೆಗೆ ಅಂಗೀಕಾರ ಪಡೆದಿದೆ.  

- Advertisement -