Home ಟಾಪ್ ಸುದ್ದಿಗಳು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು

►ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರದಲ್ಲಿ ಬದಲಾವಣೆ


ಮಾಣಿ : ಭಾರೀ ಮಳೆ ಪ್ರಭಾವದಿಂದ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಈ ನಿಟ್ಟಿನಲ್ಲಿ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಪೊಲೀಸರು ಮಾಹಿತಿ ನೀಡುತ್ತಿದ್ದಾರೆ.


ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಬೆಂಗಳೂರು ಸೇರಿದಂತೆ ಸಕಲೇಶಪುರ, ಹಾಸನ ತೆರಳುವ ವಾಹನಗಳು ಬದಲಿ ರಸ್ತೆಗಳಾದ ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version