ಅರುಣಾಚಲ ಪ್ರದೇಶದಲ್ಲಿ ಭೂಕುಸಿತ

Prasthutha|

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಇಂದು ಭಾರೀ ಭೂಕುಸಿತ ಸಂಭವಿಸಿದ್ದು, ಚೀನಾದ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ.

- Advertisement -


ದಿಭಾಂಗ್ ಕಣಿವೆಯು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ಘಟನೆಯ ಬಗ್ಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಳವಳ ವ್ಯಕ್ತಪಡಿಸಿದ್ದಾರೆ.


ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸತತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ರಸ್ತೆಯು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ ಕಾರಣ ಶೀಘ್ರದಲ್ಲಿ ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.



Join Whatsapp